Luke 18:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.
Kannada BSI Bible 2016
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರುವಂತೆ ಬಿಡಿರಿ; ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ದೇವರ ರಾಜ್ಯವು ಅಂಥವರದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರತರಿಸಿ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.
Kannada Bible (KNCL) BSI 2016
ಆಗ ಯೇಸು ಆ ಹಸುಳೆಗಳನ್ನು ತಮ್ಮ ಬಳಿಗೆ ಕರೆತರಿಸಿ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.