Luke 18:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
Kannada BSI Bible 2016
ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯಭಿಚಾರ ಮಾಡಬಾರದು; ನರಹತ್ಯ ಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ ಎಂದು ಹೇಳಿದನು.
Kannada Bible (KNCL) BSI 2016
ದೈವಾಜ್ಞೆಗಳು ನಿನಗೆ ತಿಳಿದೇ ಇವೆ; ‘ವ್ಯಭಿಚಾರ ಮಾಡಬೇಡ, ನರಹತ್ಯೆ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು’,” ಎಂದು ಯೇಸು ಅವನಿಗೆ ಉತ್ತರವಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.