Luke 18:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Kannada BSI Bible 2016
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
Kannada Bible (KNCL) BSI 2016
ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.