Luke 18:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ‘ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.
Kannada BSI Bible 2016
ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು - ನ್ಯಾಯ ವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು ಎಂದು ಹೇಳಿಕೊಳ್ಳುತ್ತಿದ್ದಳು.
Kannada Bible (KNCL) BSI 2016
ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿ ಅನ್ಯಾಯಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ,’ ಎಂದು ಕೇಳಿಕೊಳ್ಳುತ್ತಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.