Luke 18:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಈ ಜೀವನದಲ್ಲಿಯೇ ಅವುಗಳಿಗಿಂತ ಅನೇಕ ಪಾಲು ಹೆಚ್ಚಾದವುಗಳನ್ನು ಪಡೆಯುವನು ಮತ್ತು ತನ್ನ ಮುಂದಿನ ಲೋಕದಲ್ಲಿ ದೇವರೊಂದಿಗೆ ಸದಾಕಾಲ ಜೀವಿಸುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಈ ಲೋಕದಲ್ಲಿ ಅನೇಕ ಪಾಲು ಹೆಚ್ಚಾಗಿ ಸಿಕ್ಕೇ ಸಿಕ್ಕುತ್ತವೇ. ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು” ಎಂದು ಹೇಳಿದನು.
Kannada BSI Bible 2016
ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಈಗಿನ ಕಾಲದಲ್ಲಿ ಅನೇಕ ಪಾಲು ಹೆಚ್ಚಾದವುಗಳು ಸಿಕ್ಕೇ ಸಿಕ್ಕುತ್ತವೆ; ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವದು ಎಂದು ಹೇಳಿದನು.
Kannada Bible (KNCL) BSI 2016
ಅವನು ಈ ಕಾಲದಲ್ಲಿ ಅದಕ್ಕಿಂತಲೂ ಮಿಗಿಲಾದುದನ್ನೂ ಮುಂದಿನ ಲೋಕದಲ್ಲಿ ಅಮರಜೀವವನ್ನೂ ಪಡೆಯುವನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು.