Luke 18:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ತನ್ನ ಹನ್ನೆರಡು ಮಂದಿ ಅಪೊಸ್ತಲರೊಂದಿಗೆ ಪ್ರತ್ಯೇಕವಾಗಿ ಮಾತಾಡಿದನು. ಅವರಿಗೆ, “ಕೇಳಿರಿ! ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ದೇವರು ತನ್ನ ಪ್ರವಾದಿಗಳ ಮೂಲಕ ಮನುಷ್ಯಕುಮಾರನ ಬಗ್ಗೆ ಬರೆಸಿರುವ ಪ್ರತಿಯೊಂದು ಸಂಗತಿಯೂ ಸಂಭವಿಸುವುದು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.
Kannada BSI Bible 2016
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.
Kannada Bible (KNCL) BSI 2016
ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು.