Luke 18:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಪೊಸ್ತಲರು ಇದನ್ನು ಗ್ರಹಿಸಿಕೊಳ್ಳಲು ಪ್ರಯತ್ನಿಸಿದರೂ ಅವರಿಗೆ ಸಾಧ್ಯವಾಗಲಿಲ್ಲ, ಏಕೆಂದರೆ ಅದರ ಅರ್ಥವು ಅವರಿಗೆ ಮರೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಆತನು ಏನು ಹೇಳುತ್ತಿದ್ದಾನೆಂದು ಅವರಿಗೆ ತಿಳಿಯಲಿಲ್ಲ.
Kannada BSI Bible 2016
ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಈ ಸಂಗತಿಗಳಲ್ಲಿ ಒಂದನ್ನಾದರೂ ಗ್ರಹಿಸಲಿಲ್ಲ, ಈ ಮಾತುಗಳು ಅವರಿಗೆ ಮರೆಯಾಗಿದ್ದವು, ಅವುಗಳ ಅರ್ಥ ಅವರಿಗೆ ಗೊತ್ತಾಗಲಿಲ್ಲ.
Kannada Bible (KNCL) BSI 2016
ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಿಕೊಳ್ಳಲಿಲ್ಲ. ಈ ಹೇಳಿಕೆ ಅವರಿಗೆ ಒಗಟಾಗಿತ್ತು. ಎಂದೇ ಯೇಸುವಿನ ಮಾತುಗಳು ಅವರಿಗೆ ಅರ್ಥವಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.