Luke 18:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನಸಮೂಹದ ಮುಂದಿದ್ದ ಜನರು ಕುರುಡನನ್ನು ಗದರಿಸಿ, ಅವನಿಗೆ ಮಾತಾಡಕೂಡದೆಂದು ಹೇಳಿದರು. ಆದರೆ ಆ ಕುರುಡನು ಮತ್ತಷ್ಟು ಗಟ್ಟಿಯಾಗಿ, “ದಾವೀದನ ಕುಮಾರನೇ, ದಯಮಾಡಿ ನನಗೆ ಸಹಾಯಮಾಡು!” ಎಂದು ಕೂಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು, “ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಮತ್ತಷ್ಟು ಬೇಡಿಕೊಂಡನು.
Kannada BSI Bible 2016
ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂದೆ ಹೋಗುತ್ತಿದ್ದವರು ಸುಮ್ಮನಿರು ಎಂದು ಅವನನ್ನು ಗದರಿಸಲು ಅವನು - ದಾವೀದನ ಕುಮಾರನೇ, ನನ್ನನ್ನು ಕರುಣಿಸು ಎಂದು ಮತ್ತಷ್ಟು ಕೂಗಿಕೊಂಡನು.
Kannada Bible (KNCL) BSI 2016
ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.