Luke 18:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನ್ಯಾಯಾಧೀಶನು ಆ ಸ್ತ್ರೀಗೆ ಸಹಾಯಮಾಡಲು ಬಯಸಲಿಲ್ಲ. ಬಹಳ ಸಮಯದ ನಂತರ ಆ ನ್ಯಾಯಾಧೀಶನು ತನ್ನೊಳಗೆ, ‘ನನಗಂತೂ ದೇವರಲ್ಲಿ ಭಯಭಕ್ತಿಯಿಲ್ಲ. ಜನರು ನನ್ನ ಬಗ್ಗೆ ಏನು ಯೋಚಿಸುತ್ತಾರೆಂಬುದರ ಬಗ್ಗೆಯೂ ಗಮನವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,
Kannada BSI Bible 2016
ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ;
Kannada Bible (KNCL) BSI 2016
ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,