Luke 18:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಕುರುಡನು, “ಪ್ರಭುವೇ, ನನಗೆ ಮತ್ತೆ ಕಣ್ಣು ಕಾಣುವಂತೆ ಮಾಡು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.
Kannada BSI Bible 2016
ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಅವನು - ನನಗೆ ಕಣ್ಣು ಬರುವಂತೆ ಮಾಡಬೇಕು, ಸ್ವಾಮೀ ಅಂದನು.
Kannada Bible (KNCL) BSI 2016
ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು. ಅದಕ್ಕವನು, “ಕರ್ತದೇವರೇ, ನನಗೆ ದೃಷ್ಟಿ ಕೊಡಿ,” ಎಂದನು.