Luke 18:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆ ಕುರುಡನಿಗೆ ದೃಷ್ಟಿ ಬಂದಿತು. ಅವನು ದೇವರನ್ನು ಸ್ತುತಿಸುತ್ತಾ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ಈ ಮಹತ್ಕಾರ್ಯಕ್ಕಾಗಿ ದೇವರನ್ನು ಕೊಂಡಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಕ್ಷಣವೇ ಅವನಿಗೆ ಕಣ್ಣು ಕಾಣಿಸಿದವು, ಅವನು ದೇವರನ್ನು ಕೊಂಡಾಡುತ್ತಾ ಯೇಸುವಿನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
Kannada BSI Bible 2016
ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಕ್ಷಣವೇ ಅವನಿಗೆ ಕಣ್ಣುಬಂದವು; ಅವನು ದೇವರನ್ನು ಕೊಂಡಾಡುತ್ತಾ ಆತನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.
Kannada Bible (KNCL) BSI 2016
ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.