Luke 18:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಈ ಸ್ತ್ರೀ ಬಂದುಬಂದು ನನ್ನನ್ನು ಕುಗ್ಗಿಸಿಬಿಡುತ್ತಾಳೆ. ಈಕೆಗೆ ನಾನು ನ್ಯಾಯವನ್ನು ದೊರಕಿಸಿಕೊಟ್ಟರೆ, ಈಕೆ ನನ್ನನ್ನು ಕಾಡಿಸುವುದಿಲ್ಲ. ಇಲ್ಲವಾದರೆ, ಈಕೆಯು ನನ್ನನ್ನು ಕಾಡಿಸುತ್ತಲೇ ಇರುವಳು’ ಎಂದುಕೊಂಡನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.”
Kannada BSI Bible 2016
ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುವದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು; ಇಲ್ಲವಾದರೆ ಈಕೆಯು ಬಂದು ಬಂದು ಕಡೆಗೆ ನನ್ನನ್ನು ದಣಿಸಾಳು ಎಂದು ತನ್ನೊಳಗೆ ಅಂದುಕೊಂಡನು.
Kannada Bible (KNCL) BSI 2016
ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’ ” ಎಂದುಕೊಂಡನು.