Luke 18:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತನ್ನ ಜನರಿಗೆ ಬೇಗನೆ ಸಹಾಯ ಮಾಡುತ್ತಾನೆ ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಮನುಷ್ಯಕುಮಾರನು ಮತ್ತೆ ಬಂದಾಗ, ಜಗತ್ತಿನಲ್ಲಿ ನಂಬಿಕೆಯನ್ನು ಕಾಣುವನೋ?” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
Kannada BSI Bible 2016
ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು.
Kannada Bible (KNCL) BSI 2016
ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.