Luke 18:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.
Kannada BSI Bible 2016
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸ ವನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ ಈ ಸಾಮ್ಯವನ್ನು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.
Kannada Bible (KNCL) BSI 2016
ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು: