Luke 19:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇನೆಂದರೆ, “ಶ್ರೀಮಂತನಾದ ಒಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರಬೇಕೆಂದು ದೂರದೇಶಕ್ಕೆ ಹೊರಟನು.
Kannada BSI Bible 2016
ಅದೇ ನಂದರೆ--ಕೀರ್ತಿವಂತನಾದ ಒಬ್ಬಾನೊಬ್ಬ ಮನುಷ್ಯನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರಿಗಿ ಬರುವದಕ್ಕಾಗಿ ದೂರ ದೇಶಕ್ಕೆ ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇನಂದರೆ - ಶ್ರೀಮಂತನಾದ ಒಬ್ಬಾನೊಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬರಬೇಕೆಂದು ದೂರದೇಶಕ್ಕೆ ಹೊರಟನು.
Kannada Bible (KNCL) BSI 2016
ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: “ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.