Luke 19:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ‘ನಾನು ಹಿಂತಿರುಗಿ ಬರುವವರೆಗೆ ಈ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, ‘ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರಿ’ ಎಂದು ಹೇಳಿ ಹೊರಟು ಹೋದನು.
Kannada BSI Bible 2016
ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಕೊಟ್ಟು - ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರ್ರಿ ಎಂದು ಹೇಳಿಹೋದನು.
Kannada Bible (KNCL) BSI 2016
ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು.