Luke 19:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ‘ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.
Kannada BSI Bible 2016
ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.
Kannada Bible (KNCL) BSI 2016
ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.