Luke 19:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ‘ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಅವನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬಂದು, ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ, ಅವರನ್ನು ತನ್ನ ಬಳಿಗೆ ಕರೆಯಿಸಿದನು.
Kannada BSI Bible 2016
ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ರಾಜ್ಯಾಧಿಕಾರವನ್ನು ಪಡಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳುಕೊಳ್ಳುವದಕ್ಕಾಗಿ ಅವರನ್ನು ತನ್ನ ಬಳಿಗೆ ಕರಿಸಿದನು.
Kannada Bible (KNCL) BSI 2016
“ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ಅವನು ತನ್ನ ರಾಜ್ಯವನ್ನು ಪಡೆದು ಹಿಂದಿರುಗಿದಾಗ, ವ್ಯಾಪಾರದಿಂದ ಇನ್ನೂ ಎಷ್ಟು ಲಾಭಗಳಿಸಿದರೆಂದು ತಿಳಿದುಕೊಳ್ಳುವಂತೆ, ತಾನು ಹಣ ಕೊಟ್ಟ ಆ ಕೆಲಸಗಾರರನ್ನು ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದನು.