Luke 19:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನು ಆ ಸೇವಕನಿಗೆ, ‘ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.
Kannada BSI Bible 2016
ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.