Luke 19:21 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ’ ಎಂದನು.
Kannada BSI Bible 2016
ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು ಅಂದನು.
Kannada Bible (KNCL) BSI 2016
ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡುಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.