Luke 19:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?
Kannada BSI Bible 2016
ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?
Kannada Bible (KNCL) BSI 2016
ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.