Luke 19:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದು ನಿಜವಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ನಾನು ಮರಳಿ ಬಂದಾಗ, ನನಗೆ ಸ್ವಲ್ಪ ಬಡ್ಡಿಯಾದರೂ ಸಿಕ್ಕುತ್ತಿತ್ತು’ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ,
Kannada BSI Bible 2016
ಹಾಗಿದ್ದರೆ ನನ್ನ ಹಣವನ್ನು ಧನ ವ್ಯವಹಾರದ ಸಂಸ್ಥೆಯಲ್ಲಿ ಯಾಕೆ ಹಾಕಲಿಲ್ಲ? ನಾನು ಬಂದಾಗ ಅದನ್ನು ಬಡ್ಡಿಯ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಅವನಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗಾದರೆ ನೀನು ನನ್ನ ಹಣವನ್ನು ಸಾಹುಕಾರನ ಕೈಯಲ್ಲಿ ಯಾಕೆ ಕೊಡಲಿಲ್ಲ? ಆಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಹೇಳಿ
Kannada Bible (KNCL) BSI 2016
ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ,’ ಎಂದು ಹೇಳಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಿದ್ದರೆ ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಏಕೆ ಹಾಕಲಿಲ್ಲ, ನಾನು ಹಿಂದಿರುಗಿದಾಗ ಹಣವನ್ನು ಬಡ್ಡಿ ಸಮೇತವಾಗಿ ತೆಗೆದುಕೊಳ್ಳುತ್ತಿದ್ದೆನು,’ ಎಂದು ಹೇಳಿದನು.