Luke 19:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಅರಸನು ಅಲ್ಲಿದ್ದ ಜನರಿಗೆ, ‘ಈ ಸೇವಕನ ಒಂದುಸಾವಿರ ರೂಪಾಯಿ ತೆಗೆದುಕೊಂಡು ಹತ್ತುಸಾವಿರ ರೂಪಾಯಿ ಸಂಪಾದಿಸಿದವನಿಗೆ ಕೊಡಿರಿ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತ್ತಿರ ನಿಂತಿದ್ದವರಿಗೆ, ‘ಆ ನಾಣ್ಯವನ್ನು ಅವನಿಂದ ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳುಳ್ಳವನಿಗೆ ಕೊಡಿರಿ’ ಎಂದು ಹೇಳಿದನು.
Kannada BSI Bible 2016
ಅವನು ಹತ್ತಿರ ನಿಂತಿದ್ದವರಿಗೆ--ಇವನ ಕಡೆಯಿಂದ ಆ ಮೊಹರಿಯನ್ನು ತಕ್ಕೊಂಡು ಹತ್ತು ಮೊಹರಿಗಳಿ ದ್ದವನಿಗೆ ಕೊಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತ್ತಿರ ನಿಂತಿದ್ದವರಿಗೆ - ಆ ಮೊಹರಿಯನ್ನು ಇವನಿಂದ ತೆಗೆದುಕೊಂಡು ಹತ್ತು ಮೊಹರಿಗಳುಳ್ಳವನಿಗೆ ಕೊಡಿರಿ ಎಂದು ಹೇಳಿದನು.
Kannada Bible (KNCL) BSI 2016
ಪರಿಚಾರಕರಿಗೆ, ‘ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು ಹತ್ತು ನಾಣ್ಯಗಳುಳ್ಳವನಿಗೆ ಕೊಡಿ,’ ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು.