Luke 19:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನನ್ನ ವೈರಿಗಳೆಲ್ಲಿ? ನಾನು ಅರಸನಾಗುವುದನ್ನು ವಿರೋಧಿಸಿದ ಜನರೆಲ್ಲಿ? ನನ್ನ ವೈರಿಗಳನ್ನು ಇಲ್ಲಿಗೆ ಕರೆದುಕೊಂಡು ಬಂದು ನನ್ನ ಕಣ್ಣೆದುರಿನಲ್ಲಿಯೇ ಕೊಲ್ಲಿರಿ!’ ಎಂದು ಹೇಳಿದನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.
Kannada BSI Bible 2016
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.
Kannada Bible (KNCL) BSI 2016
“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”