Luke 19:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೇಸು ಹೇಗಿದ್ದಾನೆಂದು ನೋಡಲು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದುದರಿಂದ, ಜನರ ಗುಂಪಿನ ನಿಮಿತ್ತ ನೋಡಲಾರದೆ ಹೋದನು.
Kannada BSI Bible 2016
ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯೇಸು ಎಂಥವನೆಂದು ನೋಡಲಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನರ ಗುಂಪಿನ ನಿವಿುತ್ತ ನೋಡಲಾರದೆ ಹೋದನು.
Kannada Bible (KNCL) BSI 2016
ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೇಸು ಯಾರೆಂದು ಕಾಣಬೇಕೆಂದು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದದರಿಂದ ಜನರ ಗುಂಪಿನ ನಿಮಿತ್ತವಾಗಿ ಅವರನ್ನು ಕಾಣಲಾರದೆ ಇದ್ದನು.