Luke 19:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಆ ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಆ ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಆ ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ, ಅದರೊಳಗೆ ಹೋಗುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ. ಇದುವರೆಗೆ ಅದರ ಮೇಲೆ ಯಾರೂ ಹತ್ತಿರುವುದಿಲ್ಲ, ಅದನ್ನು ಬಿಚ್ಚಿ ಕರೆತನ್ನಿರಿ.
Kannada BSI Bible 2016
ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ.
Kannada Bible (KNCL) BSI 2016
“ಎದುರಿಗೆ ಇರುವ ಆ ಹಳ್ಳಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸುವಾಗ ಅಲ್ಲೇ ಕಟ್ಟಿಹಾಕಿರುವ ಹೇಸರಗತ್ತೆಯ ಮರಿಯೊಂದನ್ನು ಕಾಣುವಿರಿ. ಈವರೆಗೆ ಅದರ ಮೇಲೆ ಯಾರೂ ಸವಾರಿಮಾಡಿಲ್ಲ. ಅದನ್ನು ಬಿಚ್ಚಿ ಇಲ್ಲಿಗೆ ತನ್ನಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ, ನೀವು ಅದರೊಳಗೆ ಪ್ರವೇಶಿಸುತ್ತಿರುವಾಗ, ಅಲ್ಲಿ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ.