Luke 19:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,
Kannada BSI Bible 2016
ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯಮಂಡಲಿಯವರೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ -
Kannada Bible (KNCL) BSI 2016
ಯೇಸು ಜೆರುಸಲೇಮನ್ನು ಸಮೀಪಿಸುತ್ತಾ ಓಲಿವ್ ಗುಡ್ಡದ ಇಳಿಜಾರನ್ನು ಮುಟ್ಟಿದಾಗ ಶಿಷ್ಯಸಮೂಹವೆಲ್ಲವೂ ತಾವು ಕಂಡ ಎಲ್ಲ ಮಹತ್ಕಾರ್ಯಗಳನ್ನು ಕುರಿತು ಹರ್ಷಾವೇಶರಾಗಿ ದೇವರ ಸ್ತುತಿಮಾಡುತ್ತಾ -
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೇಸು ಓಲಿವ್ ಗುಡ್ಡದಿಂದ ಇಳಿಜಾರನ್ನು ಸಮೀಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ಕಂಡ ಎಲ್ಲ ಮಹತ್ಕಾರ್ಯಗಳಿಗಾಗಿ ಸಂತೋಷಪಡುತ್ತಾ, ಮಹಾ ಸ್ವರದಿಂದ ದೇವರನ್ನು ಹೀಗೆ ಕೊಂಡಾಡಲಾರಂಭಿಸಿದರು: