Luke 19:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
Kannada BSI Bible 2016
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
Kannada Bible (KNCL) BSI 2016
“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.