Luke 19:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.
Kannada BSI Bible 2016
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳುಕೊಳ್ಳಲಿಲ್ಲವಾದದರಿಂದ ನಿನ್ನ ವೈರಿಗಳು ಒಡ್ಡುಕಟ್ಟಿ ನಿನ್ನ ಸುತ್ತಲೂ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಲ್ಲಿಯೂ ನಿನ್ನನ್ನು ಬಂದುಮಾಡಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು ಅಂದನು.
Kannada Bible (KNCL) BSI 2016
ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.