Luke 19:44 — Compare Translations

4 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.
Kannada BSI Bible 2016
ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
Kannada Bible (KNCL) BSI 2016
ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.