Luke 19:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.
Kannada BSI Bible 2016
ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆತನು ದಿನಾಲು ದೇವಾಲಯದಲ್ಲಿ ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ಮುಖ್ಯಸ್ಥರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು.
Kannada Bible (KNCL) BSI 2016
ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.