Luke 19:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.
Kannada BSI Bible 2016
ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಜನರೆಲ್ಲರು ಆತನನ್ನು ಅಂಟಿಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದದರಿಂದ ಏನು ಮಾಡಬೇಕೋ ತೋರಲಿಲ್ಲ.
Kannada Bible (KNCL) BSI 2016
ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನು ಕೇಳಲು ಆತುರರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.