Luke 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ, “ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಉಳಿದುಕೊಳ್ಳಬೇಕು” ಎಂದು ಅವನಿಗೆ ಹೇಳಲು,
Kannada BSI Bible 2016
ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಇಳುಕೊಳ್ಳಬೇಕು ಎಂದು ಅವನಿಗೆ ಹೇಳಲು
Kannada Bible (KNCL) BSI 2016
ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು.