Luke 2:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು,
Kannada BSI Bible 2016
ದೂತನು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು--ಕರ್ತನು ನಮಗೆ ಪ್ರಕಟ ಮಾಡಿದ ಈ ಸಂಭವವನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು - ನಾವು ಈಗಲೇ ಬೇತ್ಲೆಹೇವಿುಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡೋಣ ನಡೆಯಿರಿ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ತಟ್ಟನೆ ಹೋಗಿ
Kannada Bible (KNCL) BSI 2016
ದೇವದೂತರು ಸ್ವರ್ಗಕ್ಕೆ ಹಿಂದಿರುಗಿದ ಮೇಲೆ ಕುರುಬರು, ‘ಬನ್ನಿ, ಸರ್ವೇಶ್ವರ ನಮಗೆ ತಿಳಿಸಿದ ಘಟನೆಯನ್ನು ನೋಡಲು ಈಗಲೇ ಬೆತ್ಲೆಹೇಮಿಗೆ ಹೋಗೋಣ,’ ಎಂದು ಒಬ್ಬರಿಗೆ ಒಬ್ಬರು ಹೇಳಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು, “ದೇವರು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.