Luke 2:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
Kannada BSI Bible 2016
ತಮಗೆ ತಿಳಿಸಲ್ಪಟ್ಟಂತೆ ಕುರುಬರು ತಾವು ಕೇಳಿದ್ದ ಮತ್ತು ನೋಡಿದ್ದ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ ಕೊಂಡಾಡುತ್ತಾ ಹಿಂದಿರುಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
Kannada Bible (KNCL) BSI 2016
ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮಗೆ ತಿಳಿಸಿದ ಪ್ರಕಾರವೇ ಕುರುಬರು ತಾವು ಕೇಳಿ, ಕಂಡ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ, ಕೊಂಡಾಡುತ್ತಾ ಹಿಂದಿರುಗಿ ಹೋದರು.