Luke 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಗುವಿಗೆ ಎಂಟು ದಿನವಾದಾಗ ಸುನ್ನತಿ ಆಯಿತು ಮತ್ತು ಆತನಿಗೆ ‘ಯೇಸು’ ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.
Kannada BSI Bible 2016
ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕೂಸಿಗೆ ಸುನ್ನತಿಮಾಡುವದಕ್ಕೆ ಕಳೆಯಬೇಕಾದ ಎಂಟು ದಿವಸಗಳು ತುಂಬಿದ ಮೇಲೆ ಅದಕ್ಕೆ ಯೇಸುವೆಂದು ಹೆಸರಿಟ್ಟರು. ಅದು ಗರ್ಭದಲ್ಲಿ ಮೂಡುವದಕ್ಕಿಂತ ಮೊದಲು ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.
Kannada Bible (KNCL) BSI 2016
ಎಂಟನೆಯ ದಿನ ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಸಂದರ್ಭದಲ್ಲಿ ಅದಕ್ಕೆ ‘ಯೇಸು’ ಎಂಬ ಹೆಸರನ್ನಿಟ್ಟು ನಾಮಕರಣ ಮಾಡಿದರು. ಈ ಹೆಸರನ್ನು ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದಂತೆ “ಯೇಸು” ಎಂದು ನಾಮಕರಣ ಮಾಡಿದರು.