Luke 2:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶುದ್ಧೀಕರಣದ ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಆತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು.
Kannada BSI Bible 2016
ಮೋಶೆಯ ನ್ಯಾಯಪ್ರಮಾಣದ ಪ್ರಕಾರ ಆಕೆಯ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ ಅವರು ಆತನನ್ನು ಕರ್ತನಿಗೆ ಸಮರ್ಪಿಸುವದಕ್ಕಾಗಿ ಯೆರೂಸಲೇಮಿಗೆ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಮೋಶೆಯ ನೇಮದ ಪ್ರಕಾರ ಅವರ ಸೂತಕ ಕಳೆಯುವದಕ್ಕೆ ತಕ್ಕಷ್ಟು ದಿವಸಗಳು ತುಂಬಲು ಅವರು ಆ ಕೂಸನ್ನು ಯೆರೂಸಲೇವಿುಗೆ ತೆಗೆದುಕೊಂಡು ಹೋದರು.
Kannada Bible (KNCL) BSI 2016
ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ನಿಯಮದ ಪ್ರಕಾರ ಮರಿಯಳಿಗೆ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ, ಯೋಸೇಫನು ಮತ್ತು ಮರಿಯಳು ಶಿಶುವನ್ನು ಕರ್ತದೇವರಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತಂದರು.