Luke 2:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.
Kannada BSI Bible 2016
ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿಕೊಡಬೇಕಾಗಿತ್ತು.
Kannada Bible (KNCL) BSI 2016
ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂತಲೂ, “ಒಂದು ಜೊತೆ ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿ ಅರ್ಪಿಸಬೇಕು,” ಎಂತಲೂ ಕರ್ತದೇವರ ನಿಯಮದಲ್ಲಿ ಹೇಳಿರುವ ಪ್ರಕಾರ ಅವರು ಸಮರ್ಪಿಸಿದರು.