Luke 2:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.
Kannada BSI Bible 2016
ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.
Kannada Bible (KNCL) BSI 2016
ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ, ಅವನು ಕರ್ತದೇವರು ಕಳುಹಿಸಲಿರುವ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ಮರಣ ಹೊಂದುವುದಿಲ್ಲವೆಂದು ಪವಿತ್ರಾತ್ಮನಿಂದ ಅವನಿಗೆ ಪ್ರಕಟನೆಯಾಗಿತ್ತು.