Luke 2:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,
Kannada BSI Bible 2016
ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು; ಆಗ ತಂದೆತಾಯಿಗಳು ಯೇಸುವೆಂಬ ಮಗುವಿಗೆ ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡಿಸಬೇಕೆಂದು ಅದನ್ನು ಒಳಕ್ಕೆ ತರಲು
Kannada Bible (KNCL) BSI 2016
ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.