Luke 2:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;
Kannada BSI Bible 2016
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.
Kannada Bible (KNCL) BSI 2016
ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.