Luke 2:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು.
Kannada BSI Bible 2016
ಅನೇಕರ ಹೃದಯ ಗಳ ಅಲೋಚನೆಗಳು ಪ್ರಕಟವಾಗುವವು. (ಹೌದು, ನಿನ್ನ ಸ್ವಂತ ಪ್ರಾಣವನ್ನು ಸಹ ಕತ್ತಿಯು ತಿವಿಯುವದು) ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಿನ್ನ ಪ್ರಾಣಕ್ಕಂತೂ ಅಲಗು ನಾಟಿದಂತಾಗುವದು ಎಂದು ಹೇಳಿದನು.
Kannada Bible (KNCL) BSI 2016
(ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,)” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು.