Luke 2:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,
Kannada BSI Bible 2016
ಅಲ್ಲಿ ಅಸೇರನ ಗೋತ್ರದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿಯಿದ್ದಳು; ಅವಳು ಬಹು ಮುಪ್ಪಿನವಳು; ತನ್ನ ಕನ್ಯಾವಸ್ಥೆಯಿಂದ ಗಂಡನೊಂದಿಗೆ ಏಳು ವರುಷ ಜೀವಿಸಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು; ಆಕೆ ತನ್ನ ಕನ್ಯಾವಸ್ಥೆ ಕಳೆದ ತರುವಾಯ ಗಂಡನ ಕೂಡ ಏಳು ವರುಷ ಬಾಳುವೆಮಾಡಿ ಎಂಭತ್ತು ನಾಲ್ಕು ವರುಷ ವಿಧವೆಯಾಗಿದ್ದಳು.
Kannada Bible (KNCL) BSI 2016
ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು.