Luke 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.
Kannada BSI Bible 2016
(ಯೋಸೇಫನು ದಾವೀದನ ಮನೆತನ ದವನೂ ವಂಶದವನೂ ಆಗಿದ್ದದರಿಂದ) ಅವನು ಸಹ ಗಲಿಲಾಯದ ನಜರೇತೆಂಬ ಪಟ್ಟಣದಿಂದ ಯೂದಾ ಯದಲ್ಲಿ ಬೇತ್ಲೆಹೇಮ್ ಎಂದು ಕರೆಯಲ್ಪಟ್ಟ ದಾವೀದನ ಪಟ್ಟಣಕ್ಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಸಹ ತಾನು ದಾವೀದನ ಮನೆತನದವನೂ ಗೋತ್ರದವನೂ ಆಗಿದ್ದದರಿಂದ ಹೆಸರು ಬರಸಿಕೊಳ್ಳುವದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದನು.
Kannada Bible (KNCL) BSI 2016
ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು.