Luke 2:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಯಾತ್ರಿಕರ ಗುಂಪಿನಲ್ಲಿ ಸೇರಿರಬಹುದೆಂದು ಊಹಿಸಿ, ಒಂದು ದಿನದ ಪ್ರಯಾಣ ಮಾಡಿಬಿಟ್ಟಿದ್ದರು. ನಂತರ ಬಂಧುಬಾಂಧವರಲ್ಲಿಯೂ ಪರಿಚಿತರಲ್ಲಿಯೂ ಹುಡುಕಾಡಿ,
Kannada BSI Bible 2016
ಆದರೆ ಆತನು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿ ಚಯವಾದವರಲ್ಲಿಯೂ ಆತನನ್ನು ಹುಡುಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ತಂದೆತಾಯಿಗಳು ಅದನ್ನು ತಿಳಿಯದೆ ಆತನು ಯಾತ್ರೆಯವರ ಗುಂಪಿನಲ್ಲಿ ಸೇರಿರುವನು ಎಂದು ಭಾವಿಸಿ ಒಂದು ದಿನದ ಪ್ರಯಾಣ ನಡೆದು ಬಂಧುಬಾಂಧವರಲ್ಲಿಯೂ ಪರಿಚಿತಿಯವರಲ್ಲಿಯೂ
Kannada Bible (KNCL) BSI 2016
ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ, ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿಚಿತರಲ್ಲಿಯೂ ಬಾಲಕ ಯೇಸುವನ್ನು ಹುಡುಕಿದರು.