Luke 2:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.
Kannada BSI Bible 2016
ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರಿಗೆ - ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದದ್ದು ನಿಮಗೆ ತಿಳಿಯಲಿಲ್ಲವೇ? ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆಹೋಯಿತೇ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದರು.