Luke 2:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.
Kannada BSI Bible 2016
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.
Kannada Bible (KNCL) BSI 2016
ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.