Luke 20:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Kannada BSI Bible 2016
ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫಲಕಾಲ ಬಂದಾಗ ದ್ರಾಕ್ಷೆಯತೋಟದ ಹುಟ್ಟುವಳಿಯ ಪಾಲನ್ನು ತೆಗೆದುಕೊಳ್ಳುವದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.
Kannada Bible (KNCL) BSI 2016
ಫಲಕಾಲ ಬಂದಾಗ ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಗೇಣಿದಾರರು ಅವನನ್ನು ಹೊಡೆದು ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಲದ ಕಾಲ ಬಂದಾಗ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷಿತೋಟದ ಫಲವನ್ನು ಕೊಡುವಂತೆ ತನ್ನ ಸೇವಕನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಆ ಗೇಣಿಗೆದಾರರು ಅವನನ್ನು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.