Luke 20:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆಗ ತೋಟದ ಯಜಮಾನನು, ‘ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
Kannada BSI Bible 2016
ಆಗ ದ್ರಾಕ್ಷೇತೋಟದ ಯಜಮಾನನು--ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿ ಸುವೆನು. ಅವರು ಇವನನ್ನು ನೋಡಿಯಾದರೂ ಇವ ನನ್ನು ಗೌರವಿಸಿಯಾರು ಎಂದು ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ದ್ರಾಕ್ಷೆಯ ತೋಟದ ಧಣಿಯು - ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು.
Kannada Bible (KNCL) BSI 2016
ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು.