Luke 20:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ರೈತರು ಮಗನನ್ನು ನೋಡಿ, ಒಬ್ಬರಿಗೊಬ್ಬರು, ‘ಇವನು ಧಣಿಯ ಮಗನು. ಈ ಹೊಲ ಇವನಿಗೇ ಸೇರುತ್ತದೆ. ನಾವು ಇವನನ್ನು ಕೊಂದರೆ, ಆಗ ಹೊಲವೆಲ್ಲಾ ನಮ್ಮದಾಗುತ್ತದೆ’ ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
Kannada BSI Bible 2016
ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ [ಕಳುಹಿಸಿದಾಗ] ಆ ಒಕ್ಕಲಿಗರು ಅವನನ್ನು ಕಂಡು - ಇವನೇ ಬಾಧ್ಯಸ್ಥನು; ಇವನನ್ನು ಕೊಂದುಹಾಕೋಣ, ಇವನ ಸ್ವಾಸ್ತ್ಯ ನಮ್ಮದಾಗಲಿ ಎಂದು ಒಬ್ಬರಸಂಗಡಲೊಬ್ಬರು ಮಾತಾಡಿಕೊಂಡು
Kannada Bible (KNCL) BSI 2016
ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಗೇಣಿಗೆದಾರರು ಅವನನ್ನು ಕಂಡಾಗ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.